ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಖಿಲ್ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹಗಳಿಗೆ ಇದೀಗ ನಿಖಿಲ್ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ. ಇದನ್ನು ಹಿಂದೆಯೂ ಹೇಳಿದ್ದೆ. ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಹೇಳುವ ಮೂಲಕ ಬಹಿರಂಗವಾಗಿ ನಾನು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ 2019 ರಲ್ಲಿ ಅಭ್ಯರ್ಥಿ ಆಗಿ ಸ್ಪರ್ದಿಸಿ, ಸೋತಿದ್ದೆ. ಕಳೆದ ನಾಲ್ಕು ದಿನಗಳಿಂದಲೂ ನಾನು ಎಲ್ಲವನೂ ಗಮನಿಸುತ್ತಿದ್ದೇನೆ. ನಾನು ಯೂ ಟರ್ನ್ ಹೊಡೆಯುವ ವ್ಯಕ್ತಿ ಅಲ್ಲ. ನನ್ನ ನಿರ್ಧಾರದ ಬಗ್ಗೆ ನನಗೆ ಸ್ಪಷ್ಟತೆ ಇದೆ ಎಂದು ತಿಳಿಸಿದರು.