ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು. ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇವೆಲ್ಲ ಸಾಕ್ಷಿ ಎಂದು ತಿರುಗೇಟು ನೀಡಿದರು. ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಪೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು ಎಂದರು.