Wednesday, October 5, 2022

Latest Posts

ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ: ಡಿ.ಕೆ ಶಿವಕುಮಾರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್‌ ದೆಹಲಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ ಡಿಕೆಶಿ ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ ಎಂದು ಹೇಳಿದ್ದಾರೆ.
ನನಗೆ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ. ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ. ಕರ್ನಾಟಕದ ಜನರ ಪರವಾಗಿ ಮಾತನಾಡಿದ್ದಕ್ಕೆ, ನಿರುದ್ಯೋಗ, ಬೆಲೆ ಏರಿಕೆಯಂತಹ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಈ ಬೆಲೆ ತೆರಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಇಂದು ಡಿ.ಕೆ ಶಿವಕುಮಾರ್‌ ವಿರುದ್ಧ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶಕ್ಕೆ ತಡೆ ಹಿಡಿಯಲಾಗಿದೆ. ನ್ಯಾ. ಸಂಜೀವ್‌ ಖನ್ನ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ಹಿಡಿಯಲಾಗಿದೆ.

ಡಿ.ಕೆ ಶಿವಕುಮಾರ್‌ ಕೋಣೆಯಲ್ಲಿ ಇ ಡಿ ಅಧಿಕಾರಿಗಳು ದಾಖಲೆ ವಶಕ್ಕೆ ಪಡೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ತನಿಖೆಗೆ ಹೈಕೋರ್ಟ್‌ ತಡೆ ಹಿಡಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!