ಹೊಸದಿಗಂತ ವರದಿ ರಾಯಚೂರು :
ಕೆಪಿಸಿಸಿ ಅಧ್ಯಕ್ಷರ ಹಾಗೂ ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಮಾತನಾಡುವಷ್ಟು ದೊಡ್ಡವ ನಾನಲ್ಲ. ರಾಜ್ಯ ಸಚಿವರು ಹಾಗೂ ಶಾಸಕರಾರು ಈ ಬಗ್ಗೆ ಮಾತನಾಡದಂತೆ ಎಐಸಿಸಿ ಅಧ್ಯಕ್ಷರು ಖಡಕ್ ಸೂಚನೆ ನೀಡಿದ್ದಾರೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಶಾಸಕ ಬಿ.ಆರ್.ಪಾಟೀಲ ಅವರು ಭ್ರಷ್ಟಾಚಾರ ಕುರಿತು ಮಾತನಾಡಿರುವ ಆಡಿಯೋ ವೈರಲ್‌ಆಗಿರುವ ಬಗ್ಗೆ ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿಲ್ಲ. ನನಗೆ ಸಂಪೂರ್ಣ ಮಾಹಿತಿ ತಿಳಿದಿಲ್ಲ. ಅದನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡಿದರೆ ಉತ್ತಮ ಎಂದು ಹೇಳಿದರು.
ಮುಖ್ಯಮಂತ್ರಿಗಳು ಅಗತ್ಯ ಕಾರ್ಯಗಳ ನಿಮಿತ್ತ ದೆಹಲಿಗೆ ತೆರಳಿದರೆ ತಪ್ಪೇನಿದೆ. ವಾರದಲ್ಲಿ ಎರಡು ಬಾರಿ ದೆಹಲಿಗೆ ಹೋಗಬಹುದು ಇದರಲ್ಲೇನ ವಿಶೇಷವಿದೆ. ಹಾಗೆ ತೆರಳಿದರು ಏನು ತಪ್ಪಿದೆ ಎಂದು ಹೇಳಿದರು.