Wednesday, June 29, 2022

Latest Posts

ಅಧಿಕಾರದಿಂದ ಯಾರು ಹೋಗುತ್ತಾರೆ, ಯಾರು ಬರುತ್ತಾರೆ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ: ಎಸ್.ಎ.ರಾಮದಾಸ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ರಾಜಕಾರಣ ಹರಿಯುವ ನೀರು. ಅಧಿಕಾರದಿಂದ ಯಾರು ಹೋಗುತ್ತಾರೆ, ಯಾರು ಅಧಿಕಾರಕ್ಕೆ ಬರುತ್ತಾರೆ ಅನ್ನೊ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಲೆಯಲ್ಲಿ ರಾಜಕೀಯ ಇಲ್ಲ. ನಾನು ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮೇಲೆ ಗಮನಹರಿಸುತ್ತಿದ್ದೇನೆ. ನಾನು ಬೆಂಗಳೂರಿಗೂ ಹೋಗಿಲ್ಲ, ದೆಹಲಿಗೂ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನನ್ನ ತಂದೆಯ ಸಮಾನ. ನಿರಂತರವಾಗಿ ನನ್ನನ್ನು ಯುವಮೋರ್ಚಾ ಅಧ್ಯಕ್ಷನ್ನಾಗಿಸಿ ಬೆಳೆಸಿದವರು. ಅವರು ರೈಲ್ವೆ ಇಂಜಿನ್ ಇದ್ದಂತೆ, ನಾವು ಬೋಗಿಗಳ ರೀತಿ ಅವರನ್ನ ಅನುಸರಿಸುತ್ತೇವೆ ಎಂದರು.
ಬಿ.ಎಸ್.ಯಡಿಯೂರಪ್ಪನವರು ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ದವಾದರೆ, ನಾನು ಯಡಿಯೂರಪ್ಪ ನಿರ್ಧಾರಕ್ಕೆ ಬದ್ಧ. ರಾಜಕಾರಣ ನಡೆಯುತ್ತಾ ಹೋಗುತ್ತೆ. ಅದಕ್ಕೆ ನಾನಾಗಲಿ ಮಠಾಧೀಶರಾಗಲಿ ಬೆಂಬಲ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss