ವಿನಯ್ ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿ ಮಾಡ್ತಾರೆ ಅನ್ನೋ ವಿಶ್ವಾಸವಿಲ್ಲ: ಬೊಮ್ಮಾಯಿ ಕಿಡಿ

ಹೊಸದಿಗಂತ ವರದಿ ಹಾವೇರಿ:

ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಸಮ್ಮತ ತನಿಖೆ ಮಾಡುತ್ತಾರೆ ಎಂಬ ವಿಶ್ವಾಸ ಇಲ್ಲ. ಈ ಪ್ರಕರಣದ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಹಲವಾರು ಪ್ರಕರಣಗಳಿಗೆ ಎಸ್‌ಐಟಿ ಮಾಡಿದ್ದಾರೆ. ಆದರೆ, ಯಾವುದೇ ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿಲ್ಲ ಮತ್ತು ಪೂರ್ಣಗೊಂಡಿಲ್ಲ. ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಮುರಿದುಬಿದ್ದು ಬಹಳ ದಿನಗಳಾಗಿವೆ. ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡುವಷ್ಟು ದುಷ್ಟ ಕಾರ್ಯಕ್ಕೆ ಇಂದು ಕಾನೂನು ಸುವ್ಯವಸ್ಥೆ ಕುಸಿದಿದೆ. ಮಂತ್ರಿಗಳನ್ನೇ ಟ್ರ್ಯಾಪ್ ಮಾಡುತ್ತಾರೆ ಅಂದರೆ ಅರ್ಥ ಏನಿದೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ರಾಜಕೀಯ ದ್ವೇಷ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಪ್ರತಿಭಟನೆ ಮಾಡಿದರೆ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಪೊಲೀಸ್ ಸ್ಟೇಷನ್‌ಗೆ ಕರೆದುಕೊಂಡು ಹೋಗುತ್ತಿದ್ದಾರೆ. ಕೇಸ್ ಹಾಕುತ್ತಿದ್ದಾರೆ. ಇದು ಬಹಳ ದೊಡ್ಡ ಪ್ರಮಾಣದಲ್ಲಿ ಎಲ್ಲ ಜಿಲ್ಲೆಯಲ್ಲಿ ನಡೆದಿದೆ ಎಂದು ಆರೋಪಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!