ನಾನು ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಲ್ಲ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಸಿಎಂ ಸಿದ್ದರಾಮಯ್ಯರ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಆಗ್ರಹಗಳು ವಿಪಕ್ಷಗಳಿಗೆ ಹೆಚ್ಚುತ್ತಿವೆ.

ಇದರ ನಡುವೆ ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ನಾನು ಹೇಳುವುದಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿಎಂ ವಿರುದ್ಧ ಮುಡಾ ಸಂಬಂಧದ ಪಾದಯಾತ್ರೆಯಲ್ಲಿ ನಾನು ಭಾಗಿಯಾಗಿದ್ದು ನಿಜ. ಹಾಗೆಂದು ನಾನು ಯಾರ ರಾಜೀನಾಮೆಗೂ ಒತ್ತಾಯಿಸಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ನಾನಂತು ಒತ್ತಾಯ ಮಾಡಲ್ಲ ಎಂದು ಹೇಳಿದರು.

ನನ್ನಿಂದ ಯಾವುದೇ ತಪ್ಪು ಆಗದಿದ್ದರೂ ಕಾನೂನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಲು ಕೆಲವರು ಯತ್ನಿಸಿದ್ದಾರೆ. ಹಾಗಾಗಿ ನಾನು ಯಾರ ರಾಜೀನಾಮೆ ಕೇಳಲ್ಲ. ದೇಶದ ಕಾನೂನು ಎಲ್ಲರಿಗೂ ಕಾನೂನು ರಕ್ಷಣೆ ನೀಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ನಡೆಸಿದ್ದರೆ ನ್ಯಾಯಾಲಯ, ಕಾನೂನು ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ. ನಾನು ಈ ಹಿಂದೆಯೂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿಲ್ಲ. ಈಗಲೂ ಕೇಳುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!