ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೂ ಮೂರು ವರ್ಷ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಗುಡುಗಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾಸನದಲ್ಲಿ ನಾಲ್ಕು ಬಾರಿ ಎಚ್.ಎಸ್.ಪ್ರಕಾಶನನ್ನು ಸೋಲಿಸಿದ್ದೇನೆ. 2013ರಲ್ಲಿ ಪ್ರಕಾಶ್‌ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ.
2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ಮೂರ್ಖನಲ್ಲ. ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.