ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
ನಾನು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕನಾಗಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಶೆಟ್ಟರ್ ಹೇಳಿದ್ದಾರೆ
ನೈತಿಕ ಕಾರಣದಿಂದ ನಾನು ಸಂಪುಟಕ್ಕೆ ಸೇರುವುದಿಲ್ಲ ಎಂದು ತಿಳಿಸಿದ್ದು, ಈ ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ಈಗಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.