ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಶಿರಸಿ:
ನೂತನ ಮಂತ್ರಿ ಮಂಡಲದಲ್ಲಿ ಸಚಿವ ಹುದ್ದೆ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಮಂಗಳವಾರ ಇಲ್ಲಿನ ಟಿ.ಎಂ.ಎಸ್.ಸಂಸ್ಥೆ ಆರಂಭಿಸಿರುವ ಸುಪರ್ ಮಾರ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರೊಡನೆ ಅವರು ಮಾತನಾಡಿದರು.
‘ಬಾಂಬೆ ಟೀಮ್ ಎಂಬುದು ಈಗ ಮುಗಿದ ಅಧ್ಯಾಯ. ನಾವೆಲ್ಲ ಬಿಜೆಪಿ ಶಾಸಕರು. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಹಿರಿಯರೇ ತೀರ್ಮಾನಿಸುತ್ತಾರೆ’ ಎಂದರು.
‘ಪಕ್ಷದ ಶಿಸ್ತು, ಸಿದ್ಧಾಂತಕ್ಕೆ ತಲೆಬಾಗಿ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಬೇಸರವಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಕಾಲಕಾಲಕ್ಕೆ ತಕ್ಕಂತೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ತಲೆಬಾಗುತ್ತೇವೆ’ ಎಂದರು.
‘ಯಡಿಯೂರಪ್ಪ ನಾಯಕತ್ವದಲ್ಲಿ ಹದಿನೇಳು ತಿಂಗಳು ಕಾರ್ಮಿಕ ಖಾತೆ ನಿಭಾಯಿಸಿದ ನೆಮ್ಮದಿ ಇದೆ’ ಎಂದರು.