ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಜಮೀರ್ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ. ಆದ್ದರಿಂದಲೇ ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಯ್ತಾ ಎಂಬ ಪ್ರಶ್ನೆಗೆ ಜಮೀರ್ ಉತ್ತರಿಸಿದ್ದಾರೆ.
ನನಗು ಅದಕ್ಕೂ ಸಂಬಂಧ ಇಲ್ಲ. ಪೊಲೀಸ್ ಇಲಾಖೆ ತೀರ್ಮಾನದಿಂದ ಬಳ್ಳಾರಿಗೆ ಶಿಫ್ಟ್ ಮಾಡಿದ್ದಾರೆ. ನಾನು ಜಿಲ್ಲಾ ಉಸ್ತುವಾರಿ ಸಚಿವ ಮಾತ್ರ. ನಾನು ಡಿಜಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.