ಅಧ್ಯಕ್ಷೀಯ ಚುನಾವಣೆಗೆ ನನ್ನ ಸ್ಪರ್ಧೆ ಖಚಿತ: ಟ್ರಂಪ್ ಅಧಿಕೃತ ಹೇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಿಲ್ಲುವುದಾಗಿ ಆ ದೇಶದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (76) ಘೋಷಿಸಿದ್ದಾರೆ. ಅಮೆರಿಕದಲ್ಲಿ ಮುಂದಿನ ಅಧ್ಯಕ್ಷೀಯ ಚುನಾವಣೆ 2024ರಲ್ಲಿ ನಡೆಯಲಿದೆ. ಡೊನಾಲ್ಡ್ ಟ್ರಂಪ್ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ಇದೇ ತಿಂಗಳ 15ರಂದು ಘೋಷಣೆ ಮಾಡುವುದಾಗಿ ಕೆಲ ದಿನಗಳ ಹಿಂದೆ ಹೇಳಿದ್ದು ಗೊತ್ತೇ ಇದೆ. ಮತ್ತೊಮ್ಮೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಪ್ರಚಾರವೂ ಇತ್ತು.

ಈಗ ಅದು ನಿಜವಾಗಿದೆ. ಅಮೆರಿಕದ ಮಧ್ಯಂತರ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ ಉಮೇದುವಾರಿಕೆಗೆ ‘ನಾನು ಸಿದ್ಧ’ ಎಂದು ಹೇಳಿಕೆ ನೀಡಿದ್ದರು. ಈಗಿನಿಂದಲೇ ಚುನಾವಣೆ ಗೆಲ್ಲಲೇಬೇಕು ಎಂಬ ಪ್ಲಾನ್ ಹಾಕಿಕೊಂಡು ಮುನ್ನಡೆಯಲು ಮುಂದಾಗಿದ್ದಾರೆ. ಟ್ರಂಪ್ 2016 ರಲ್ಲಿ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.

ಆಗ ಡೆಮಾಕ್ರಟಿಕ್ ನಾಯಕಿ ಹಿಲರಿ ಕ್ಲಿಂಟನ್ ಎದುರು ಟ್ರಂಪ್ ಸೋಲುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಟ್ರಂಪ್ ಗೆದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು. ಬಳಿಕ 2020 ರಲ್ಲಿ ಎರಡನೇ ಬಾರಿಗೆ ರಿಪಬ್ಲಿಕನ್ ಪಕ್ಷದಿಂದಲೇ ಸ್ಪರ್ಧಿಸಿ ಜೋ ಬಿಡೆನ್ ವಿರುದ್ಧ ಸೋಲನ್ನನುಭವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!