Sunday, January 11, 2026

ಟನಲ್ ರಸ್ತೆ ವಿಚಾರದಲ್ಲಿ ಆರ್. ಅಶೋಕ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲು ನಾನು ರೆಡಿ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟನಲ್ ರಸ್ತೆ ವಿಚಾರವಾಗಿ ರಾಜ್ಯದಲ್ಲಿ ಭಾರೀ ಚರ್ಚೆ ಶುರುವಾಗಿದ್ದು, ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು.‌ ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ ಎಂದರು.

ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ ಮಾರ್ಗಗಳ ಬಗ್ಗೆ ಆಲೋಚನೆ ನಡೆಸುತ್ತಿದ್ದೇನೆ. ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದರು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!