ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, 16ನೇ ಬಾರಿಗೆ ಬಜೆಟ್ ಮಂಡನೆಗೆ ಮಾಡಿ ದಾಖಲೆ ಬರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ… pic.twitter.com/XKr8ghdAId
— CM of Karnataka (@CMofKarnataka) March 7, 2025