ಉಪರಾಷ್ಟ್ರಪತಿಗೆ ಅವಮಾನ ಮಾಡಿರುವುದು ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಗೆ (Jagdeep Dhankhar) ವಿಪಕ್ಷಗಳ ನಾಯಕರಿಂದ ಅವಮಾನ ಮಾಡಿರುವುದು ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ ಎಂದು (Droupadi Murmu) ಬೇಸರ ವ್ಯಕ್ತಪಡಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳಾಗಿರಬೇಕು ಎಂದರು.

ನಮ್ಮದು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ. ಸಂಸದರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ಭಾರತದ ಜನರು ನಿರೀಕ್ಷಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಸಂಸತ್ ಇತಿಹಾಸದಲ್ಲೇ ಗರಿಷ್ಠಮಟ್ಟದಲ್ಲಿ ಅಮಾನತು ಆಗಿರೋ ಸಂಸದರು ಪ್ರತಿಭಟನೆ ವೇಳೆ ಅಣಕು ಸಂಸತ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿಯೂ ಆಗಿರೋ ರಾಜ್ಯಸಭೆ ಚೇರ್ಮನ್ ಜಗದೀಪ್ ಧನ್ಕರ್‍ರನ್ನು ಅನುಕರಿಸಿ ಮಿಮಿಕ್ರಿ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!