ನನ್ನ ಹೇಳಿಕೆಯಿಂದ ನೋವುಂಟಾಗಿದ್ದರೆ ಕ್ಷಮೆ ಕೇಳುವೆ: ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಯುವತಿಯರು ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂದು ವಿವಾದತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕೊನೆಗೂ ಕ್ಷಮೆಯಾಚಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಕ್ಷಮೆಯಾಚಿಸಬೇಕು ಎಂಬುದಾಗಿ ಬಿಜೆಪಿ ನಾಯಕರು ಒತ್ತಾಯಿಸುತ್ತಿರುವಂತ ಬೆನ್ನಲ್ಲೇ, ನನ್ನ ಹೇಳಿಕೆಯಿಂದ ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದ್ದೇನೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!