ಹೊಸದಿಗಂತ ಆನ್ ಲೈನ್ ಡೆಸ್ಕ್:
ವಿಧಾನ ಸಭೆಯಲ್ಲಿ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಇಲ್ಲವೇ ಎಂಬ ಬಗ್ಗೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಕುತೂಹಲವಿದೆ. ಈ ಬಗ್ಗೆ ಸ್ಪಷ್ಟಪಡಿಸುವಂತೆ ಹೇಳಿದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ಇದೇ ವೇಳೆ ಸಚಿವ ಆರ್. ಅಶೋಕ್, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೀರಿ ಎಂಬುದನ್ನೂ ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2018ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂದುಕೊಂಡಿದ್ದೆ. ಆದರೆ ಈಗ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲೇ ಬೇಕು ಎಂಬ ಛಲ ಹೊಂದಿದ್ದೇನೆ. ಈ ಬಗ್ಗೆ ಯಾವುದೇ ಸಂಶಯಗಳು ಬೇಡ ಬಾದಾಮಿ ಕ್ಷೇತ್ರದಿಂದಲೇ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರು.