ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಆರ್ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತಾನೇ ಎಂದು ಘೋಷಿಸಿಕೊಂಡಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ‘ಮುಸಾಹರ್-ಭುಯಾ ಮಹಾ ರ್ಯಾಲಿ’ ಉದ್ದೇಶಿ ಮಾತನಾಡಿದ ತೇಜಸ್ವಿ, ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಮತ್ತು ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ, ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರು ಮೈ-ಬೆಹನ್ ಸಮ್ಮಾನ್ ಯೋಜನೆಯಡಿ ಪ್ರಯೋಜನೆ ಪಡೆಯುತ್ತಾರೆ ಎಂದು ಹೇಳಿದರು.
ನಾನು ಮುಖ್ಯಮಂತ್ರಿಯಾದರೆ, ನಿಮಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ಖಚಿತ. ನಾನು(ಮುಖ್ಯಮಂತ್ರಿ ನಿತೀಶ್ ಕುಮಾರ್ಗಿಂತ) ಚಿಕ್ಕವನಾಗಿದ್ದರೂ, ನನ್ನ ಮಾತುಗಳಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.