ಹೊಸ ದಿಗಂತ ಡಿಜಿಟಲ್ ಡೆಸ್ಕ್:
2028 ರಲ್ಲಿ ಬರುವ ವಿಧಾನಸಭೆ ಚುನಾವಣೆಯಲ್ಲಿ ನಾನೇ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೇಳಿದ್ದೇನೆ. ಆದರೆ ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದು ಸಿಎಂ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಈ ಅವಧಿಗೆ ಸಿಎಂ ಆಗಲು ಬರುವುದಿಲ್ಲ. ಈಗ ಮುಖ್ಯಮಂತ್ರಿಗಳು ಇದ್ದಾರೆ. ಹಾಗಾಗಿ ಅಂತಹ ಅವಶ್ಯಕತೆ ಬರಲ್ಲ. ಮುಂದಿನ ಅವಧಿಗೆ ನಾನು ಸಿಎಂ ಆಕಾಂಕ್ಷಿ, ಸಿಎಂ ಸ್ಥಾನದ ವಿಚಾರಗಳು ಈಗ ಇಲ್ಲ ಎಂದಿದ್ದಾರೆ.
ನಮ್ಮ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಕೆಲಸಗಳು ನಡೆದಿವೆ. ರಾಜ್ಯದಲ್ಲಿ ಶೇ.60ರಷ್ಟು ಪರ್ಸೆಂಟೇಸ್ ಸರ್ಕಾರ ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ಬರೀ ಆರೋಪ ಮಾಡುವುದಲ್ಲ. ಅದನ್ನು ಸಾಬೀತು ಮಾಡಬೇಕು. ಸುಮ್ಮನೇ ಹೇಳುವುದು ಆಗುವುದಿಲ್ಲ ಎಂದರು.