ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಪ್ರಮುಖ ಟಾರ್ಗೆಟ್ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದರು.
ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿದರು.
ನನ್ನ ಮೇಲೆ ತನಿಖೆ ನಡೆಸುತ್ತಿರುವುದು ಯಾವ ಉದ್ದೇಶಕ್ಕೆ? ನನ್ನ ಮೇಲೆ ಮೊನ್ನೆ ಯಾವ ಆಧಾರದ ಮೇಲೆ ಕಂಪ್ಲೇಟ್ ಕೊಟ್ಟಿದ್ದೀರಾ? ಮೊನ್ನೆ ಯಾವುದೋ ಒಂದು ಎನ್‌ಸಿಆರ್ ಹಾಕಿದ್ದಾರೆ. ಎಫ್‌ಐಆರ್ ಮಾಡಿಸಲೆಬೇಕೆಂದು ಸಿಎಂ ಮನೆಗೆ ಅಧಿಕಾರಿಗಳನ್ನು ಕರೆಸಿಕೊಂಡಿದ್ದಾರೆ. ಏನೇನೂ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಪ್ರಮುಖ ಟಾರ್ಗೆಟ್ ಎಂದರೆ ನಾನೇ. ಆದರೆ ನಾನು ನ್ಯಾಯಬದ್ಧವಾಗಿ ನ್ಯಾಯಾಲಯಕ್ಕೆ ಬಿಟ್ಟಿದ್ದೇನೆ ಎಂದು ಹೇಳಿದರು.