ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ ಮಾಜಿ ಪ್ರಧಾನಿ ಹಾಗೂ ಕರ್ನಾಟಕದ ಅಳಿಯ ರಿಷಿ ಸುನಕ್ ಐಪಿಎಲ್ ಫೈನಲ್‌ಗೆ ಆರ್‌ಸಿಬಿ ತಂಡಕ್ಕೆ ಬೆಸ್ಟ್ ವಿಶ್ ತಿಳಿಸಿದ್ದಾರೆ.
ಭಾರತ ಭೇಟಿಯ ಸಂದರ್ಭದಲ್ಲಿ ಮಾತನಾಡಿದ್ದ ಸುನಕ್, ಆರ್‌ಸಿಬಿಯೊಂದಿಗಿನ ನನ್ನ ಬಾಂಧವ್ಯ ಕುಟುಂಬದ ಮೂಲಕ ಶುರುವಾಯಿತು ಎಂದು ತಿಳಿಸಿದ್ದರು. ಆದ್ದರಿಂದ ಆರ್‌ಸಿಬಿ ನನ್ನ ತಂಡ ಎಂದು ತಿಳಿಸಿದ್ದಾರೆ.
ಸುನಕ್ ತಂಡದ ಬಗ್ಗೆ ಅದರಲ್ಲೂ ವಿಶೇಷವಾಗಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿಯಾಗಿದ್ದಾಗ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೀಡಿದ್ದ ಕೊಹ್ಲಿ ಸಹಿ ಮಾಡಿದ್ದ ಬ್ಯಾಟ್ ಹಿಡಿದು ‘ಕೊಹ್ಲಿ ಅವರೊಬ್ಬ ಲೆಜೆಂಡ್’ ಎಂದು ಹೇಳಿದ್ದಾರೆ.