Friday, September 19, 2025

ಪ್ರಧಾನಿ ಮೋದಿಗೆ ನಾನು ತುಂಬಾನೇ ಕ್ಲೋಸ್: ಅಚ್ಚರಿಯ ಹೇಳಿಕೆ ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವ್ಯಾಪಾರ ಸುಂಕಗಳ ಕಾರಣಕ್ಕೆ ಭಾರತದ ವಿರುದ್ಧ ಮುನಿಸಿಕೊಂಡಿದ್ದರೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಾರೆ.

ಲಂಡನ್‌’ನಲ್ಲಿ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ, ‘ನಾನು ಭಾರತಕ್ಕೆ ತುಂಬಾ ಹತ್ತಿರವಾಗಿದ್ದೇನೆ, ನಾನು ಭಾರತದ ಪ್ರಧಾನಿಗೆ ತುಂಬಾ ಹತ್ತಿರವಾಗಿದ್ದೇನೆ. ನಾನು ಅವರೊಂದಿಗೆ ಮಾತನಾಡಿದೆ. ನಾನು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದೆ. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ ಎಂದು ಹೇಳಿದರು.

ಭಾರತದ ಬಗ್ಗೆ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿವೆ.

ಇದನ್ನೂ ಓದಿ