Sunday, June 26, 2022

Latest Posts

“ರೈತರು ಆರ್ಥಿಕವಾಗಿ ಸದೃಢವಾಗಲು, ಅವರ ಆದಾಯ ಎರಡು ಪಟ್ಟು ಹೆಚ್ಚಿಸೋ ಕೆಲಸ ಮಾಡ್ತಿದ್ದೇನೆ”

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ,ಹಾವೇರಿ:

ರೈತರು ಆರ್ಥಿಕವಾಗಿ ಸದೃಢವಾಗಲು ಅವರ ಆದಾಯ ಎರಡು ಪಟ್ಟು ಹೆಚ್ಚಿಸೋ ಕೆಲಸ ಮಾಡ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಶಿಗ್ಗಾಂವ ತಾಲೂಕಾ ಕಲಕಟ್ಟಿ ಗ್ರಾಮದಲ್ಲಿ 34.47 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾದ ಶಿಗ್ಗಾಂವ ಏತನೀರಾವರಿ ಯೋಜನೆಯಿಂದ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸಕ್ತ ಭೂಮಿಯ ಪ್ರಮಾಣ ಕಡಿಮೆ ಆಗುತ್ತಿದೆ. ಆದಾಯ ಪ್ರಮಾಣಕಡಿಮೆ ಆಗುತ್ತಿದೆ. ರೈತರ‌‌ ಮಕ್ಕಳು ಬೇರೆಯವರಂತೆ ಮುಂದೆ ಬರಬೇಕು.
ದೇಶದಲ್ಲಿ ಇಂತಹ ಯೋಜನೆ ಇರೋದು ಕರ್ನಾಟಕದಲ್ಲಿ ಮಾತ್ರ. ರೈತರಿಗೆ ಇದು ಮಾತ್ರವಲ್ಲದೆ ಬೇರೆ ಬೇರೆ ರೀತಿಯ ತರಬೇತಿ ಕೊಟ್ಟು ಅವರ ಅಭಿವೃದ್ಧಿ ಆಗುವಂತೆ ಮಾಡುತ್ತೇನೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಆರ್ ಸಿಸಿ ಮನೆಗಳು ನೌಕರಿ ಮಾಡೋರದು ಮಾತ್ರ ಆಗಿದೆ. ಹೀಗಾಗಿ ರೈತರ ಮಕ್ಕಳಿಗಾಗಿ ಯೋಜನೆ ರೂಪಿಸಿದ್ದೇನೆ ಎಂದು ತಿಳಿಸಿಸರು.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಿದ್ದೇನೆ. ಅಧಿಕಾರಿಗಳು ಬಹಳ ದುಡ್ಡು ಆಗುತ್ತೆ ಅಂದರು.
ಅದು ಬಡವರ ದುಡ್ಡು ಅವರಿಗೆ ಕೊಡಲು ನಿಮಗೇನು ಕಷ್ಟ ಅಂದೆ. ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು ಅಂದಾಗಮಾತ್ರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ದುಡಿಮೆ ಇದ್ದ ನಾಡು ಶ್ರೀಮಂತ ಆಗುತ್ತದೆ. ನಾಡಿನ ಜನತೆ ಶ್ರೀಮಂತರಾದ್ರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ. ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನ ಇಟ್ಟುಕೊಂಡಿದ್ದೆ. ಅವೆಲ್ಲವನ್ನೂ ಬರೋ‌ ದಿನಗಳಲ್ಲಿ ಮಾಡಿಕೊಡ್ತೇನೆ ಎಂದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಖಾತೆ ಸಚಿವ ಸಿ.ಸಿ ಪಾಟೀಲ,ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss