ನನ್ನ ತುಳಿದಷ್ಟು ಮೇಲೆ ಚೆಂಡಿನಂತೆ ಪುಟಿದೇಳುತ್ತೇನೆ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ನಾನು ತುಳಿದಷ್ಟು ಮೇಲೆ ಚೆಂಡಿನಂತೆ ಪುಟಿಯುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿನ ಈಡಿಗ ಸಮಾವೇಶದ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು,ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಜನಸಾಮಾನ್ಯರು ತೀರ್ಮಾನಿಸುತ್ತಾರೆ. ನನ್ನನ್ನು ತುಳಿಯಲು ಯಾರಿಂದಲೂ ಸಾಧ್ಯವಿಲ್ಲ. ತುಳಿದಷ್ಟು ಮೇಲೆ ಪುಟಿಯುತ್ತೇನೆ. ಈಡಿಗ ಸಂಘದಲ್ಲಿ ಬಹಳ ದೊಡ್ಡ ದೊಡ್ಡ ನಾಯಕರು ಸಂಘ ಕಟ್ಟಿದ್ದಾರೆ. ಸರ್ಕಾರದ ಗಮನ ಸೆಳೆಯಲು, ಸಮಾಜದ ಹಿತ ಕಾಪಾಡಲು ಸಂಘ ಇತ್ತು. ಆದರೆ ಇತ್ತೀಚೆಗೆ ಬಂದವರು ಸಮಾಜದಲ್ಲಿ ಏನ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

50 ಲಕ್ಷ ಜನ ಸಂಖ್ಯೆ ಇರುವ ಈಡಿಗ ಸಮಾಜದಲ್ಲಿ ಕೇವಲ ಹನ್ನೆರಡು ಸಾವಿರ ಸದಸ್ಯರು ಇರುವ ಸಂಘದಿಂದ ಪ್ರತಿನಿಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಇದೊಂದು ರಾಜಕೀಯ ಕುತಂತ್ರದಿಂದ ಮಾಡಿದ ಸಮಾವೇಶ ಆಗಿದೆ‌. ಕುತಂತ್ರ ಅಂತಲೇ ಹೇಳುತ್ತೇನೆ ನೀವೆನಾದರೂ ಭಾವಿಸಿಕೊಳ್ಳಿ ಎಂದು ಹೇಳಿದರು.

ಕುತಂತ್ರದಿಂದ ಸಮಾವೇಶ ಆಯೋಜನೆ ಮಾಡಲಾಗಿದೆ. ಸಿಎಂ, ಡಿಸಿಎಂ ಭಾಗಿಯಾಗುತ್ತಿದ್ದಾರೆ. ಆದರೆ ನಾನು ಈ ಸಮಾವೇಶಕ್ಕೆ ಹೋಗುತ್ತಿಲ್ಲ. ಈಡಿಗ, ಬಿಲ್ಲವ, ನಾಮಧಾರಿ ಮತ್ತು ದೀವರು ಸೇರಿ 26 ಒಳಪಂಗಡಗಳಿವೆ. ಈಡಿಗ ಸಮಾಜದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಇದೆ. ಆದರೆ ಈಡಿಗ ಸಂಘದಲ್ಲಿ ಇರುವುದು ಕೇವಲ 12 ಸಾವಿರ ಸದಸ್ಯತ್ವ. 75 ವರ್ಷಗಳ ಅಮೃತ ಮಹೋತ್ಸವ ಎಂದು ಹೇಳುತ್ತಾರೆ. ಬೆಳ್ಳಿ ಮತ್ತು ಸುವರ್ಣ ಮಹೋತ್ಸವ ಯಾವಾಗ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!