August 28, 2026
Friday, August 28, 2026
spot_img

ಭಕ್ತನಾಗಿ ನೊಣವಿನಕೆರೆಗೆ ಬಂದೆ: 25 ವರ್ಷದ ನಂಟು ನೆನಪಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ವರದಿ ತುಮಕೂರು:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಅಲ್ಲ, ಭಕ್ತನಾಗಿ ಈ ಪವಿತ್ರ ಕ್ಷೇತ್ರಕ್ಕೆ ಬಂದಿದ್ದೇನೆ ಎಂದು ಹೇಳಿದರು.

ರಾಜ್ಯದ ಸುಭಿಕ್ಷತೆಗಾಗಿ ವಿಶೇಷ ಪ್ರಾರ್ಥನೆ

ಕಳೆದ 25 ವರ್ಷಗಳಿಂದ ಈ ಮಠದೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದು, ಇಲ್ಲಿನ ಪ್ರತಿಯೊಂದು ಬೆಳವಣಿಗೆಯೂ ತಮಗೆ ಪರಿಚಿತವಾಗಿದೆ ಎಂದು ಸಿಎಂ ತಿಳಿಸಿದರು. ರಾಜ್ಯದ ಒಳಿತಿಗಾಗಿ ಹಾಗೂ ಜನರ ಸುಖ-ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಗುಹೆಯೊಳಗೆ ರಹಸ್ಯ ವಿಶೇಷ ಪೂಜೆ

ಮಠದ ಪೀಠಾಧಿಪತಿಗಳ ನೇತೃತ್ವದಲ್ಲಿ ಮಠದ ಆವರಣದಲ್ಲಿರುವ ಪವಿತ್ರ ಗುಹೆಯೊಳಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ನೆರವೇರಿಸಿದರು. ಪೂಜೆ ವೇಳೆ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಇತರರಿಗೆ ಗುಹೆಯೊಳಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ:

ಕಾರ್ಯಕರ್ತರಿಗೆ ಕೈಬೀಸಿ ಶುಭಾಶಯ

ಮಠದ ಆವರಣದಲ್ಲಿ ಜಮಾಯಿಸಿದ್ದ ಭಕ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರತ್ತ ಸಿಎಂ ಕೈಬೀಸಿ ಶುಭಾಶಯ ಕೋರಿದರು. ಬಳಿಕ ಅವರು ಮುಂದಿನ ಕಾರ್ಯಕ್ರಮಗಳಿಗಾಗಿ ನಿರ್ಗಮಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತಿ

ಈ ಸಂದರ್ಭದಲ್ಲಿ ಶಾಸಕ ಕೆ. ಷಡಕ್ಷರಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕ ಎಂ.ಟಿ. ಕೃಷ್ಣಪ್ಪ, ಕಾಂಗ್ರೆಸ್ ಮುಖಂಡ ನಿಖಿತ್ ರಾಜ್ ಮೌರ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !