Sunday, January 29, 2023

Latest Posts

ನಾನು ಭ್ರಷ್ಟ ಅಧಿಕಾರಿಯಾಗಲಾರೆ: ಸರಕಾರಿ ಕಚೇರಿಗಳಿಗೆ ಬಂತು ಹೊಸ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರ ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಸರ್ಕಾರ ಟಕ್ಕರ್ ನೀಡಿದೆ.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈ ನಾಮಫಲಕ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ ಮಹತ್ವದ ಆದೇಶ ಮಾಡಲಾಗಿದೆ.
ಅಕ್ಟೋಬರ್ 2ರಿಂದ 20ರವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಹಮ್ಮಿಕೊಂಡಿರುವ ರಾಜ್ಯ ಸರ್ಕಾರ ತನ್ನ ಮೇಲಿನ ಆರೋಪಮುಕ್ತವಾಗಲು ಹೊರಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!