ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ, ನನ್ನ ಬಗ್ಗೆ ಟ್ರೋಲ್ ಮಾಡುವವರು ಉದ್ಧಾರಾಗಲ್ಲ: ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023-2024 ನೇ ಸಾಲಿನ SSLC ಫಲಿತಾಂಶ ಹೊರಬಿದ್ದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ನನಗೆ ಚೆನ್ನಾಗಿ ಓದಲು ಬರುತ್ತಿರಲಿಲ್ಲ. ನನಗೆ ಕನ್ನಡ ಚೆನ್ನಾಗಿ ಓದಲು ಬರುವುದಿಲ್ಲ. ಉಚ್ಚಾರಣೆ ಸ್ವಲ್ಪ ತಪ್ಪಾಗುತ್ತದೆ. ನನ್ನನ್ನು ದಬ್ಬಾಳಿಕೆ ಮಾಡುವವರಿಗೆ ಎಂದಿಗೂ ಒಳ್ಳೆಯದಾಗಲ್ಲ ಎಂದು ಕಿಡಿಕಾರಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ‌‌‌ 625ಕ್ಕೆ 625 ಅಂಕ ಪಡೆಯುವ ಮುಖಾಂತರ ಸಾಧನೆ ಮಾಡಿದ್ದಾರೆ. ನಮ್ಮ ಇಲಾಖೆವತಿಯಿಂದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರಿಗೆ ಧನ್ಯವಾದ ತಿಳಿಸುತ್ತೇನೆ.

ನಾವು ಹಲವು ಬದಲಾವಣೆಗಳನ್ನು ಮಾಡಿದ್ದೇವೆ. ಪಠ್ಯಪುಸ್ತಕ ಬದಲಾವಣೆ, ಶಿಕ್ಷಕರ ನೇಮಕ ಸೇರಿದಂತೆ ಹಲವು ಬದಲಾವಣೆ ತಂದಿದೆ. ಅನುದಾನಿತ ಶಾಲೆಗಳಲ್ಲೂ ಶಿಕ್ಷಕರನ್ನು ನೇಮಿಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!