‘ಎಲ್ಲವನ್ನೂ ಬಹಿರಂಗವಾಗಿ ಹೇಳೋಕಾಗಲ್ಲ, ಈಶ್ವರಪ್ಪ ,ಜಾರಕಿಹೊಳಿ ಜತೆ ಸಂಪರ್ಕದಲ್ಲಿದ್ದೇನೆ’

ಹೊಸದಿಗಂತ ವರದಿ ಬೆಳಗಾವಿ:

ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕ ವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಸಿಬಿಐ ದಾಳಿ
ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಗೆ ಉತ್ತರಿಸಿ ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಅವರ ಬಳಿ ಇರುವ ಪ್ರಕರಣ ಇದೆ ಅದರ ಮೇಲೆ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದರು.

ಹಲಾಲ್ ಕಟ್
ಹಲಾಲ್ ಕುರಿತು ಸುದ್ದಿದಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಹಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!