ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಯಾಕೆಂದರೆ…: ಪ್ರಿಯಾಂಕಾ ಗಾಂಧಿ ಹೇಳಿದ್ರು ಕಾರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಯಾಕೆಂದರೆ ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ನಾನು ಒಟ್ಟಿಗೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅದು ಬಿಜೆಪಿಗೆ (BJP) ಲಾಭವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಳೆದ 15 ದಿನಗಳಿಂದ ನಾನು ರಾಯ್‌ ಬರೇಲಿಯಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಗಾಂಧಿ ಕುಟುಂಬಕ್ಕೂ ರಾಯ್‌ ಬರೇಲಿಗೂ ಹಳೆಯ ಸಂಬಂಧವಿದೆ. ಹಾಗಾಗಿ, ನಾವು ಇಲ್ಲಿಗೆ ಬಂದು ಅವರನ್ನು ಭೇಟಿ ಮಾಡಿ ಅವರೊಂದಿಗೆ ಸಂವಹನ ನಡೆಸುತ್ತೇವೆ ಎಂದು ಜನರು ನಿರೀಕ್ಷಿಸುತ್ತಾರೆ. ನಾವು ರಿಮೋಟ್ ಕಂಟ್ರೋಲ್ ಮೂಲಕ ಇಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!