ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆಯ ಸ್ವರ್ಗೇಟ್ ಬಳಿ ನಿಲ್ಲಿಸಿದ್ದ ಬಸ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ದತ್ತಾತ್ರೇಯ ಗಡೆಯನ್ನು ಪುಣೆ ಪೊಲೀಸರು ಇಂದು ಬಂಧಿಸಿದ್ದಾರೆ.
75 ಗಂಟೆಗಳ ಸುದೀರ್ಘ ಹುಡುಕಾಟದ ನಂತರ ಬಂಧಿಸಲ್ಪಟ್ಟ ಪುಣೆ ಬಸ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ತಾನು ದೊಡ್ಡ ತಪ್ಪು ಮಾಡಿರುವುದಾಗಿ ದತ್ತಾತ್ರೇಯ ರಾಮದಾಸ್ ಗಡೆ ಒಪ್ಪಿಕೊಂಡಿದ್ದಾನೆ. ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ವೈದ್ಯಕೀಯ ಕೌನ್ಸಿಲರ್ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ದತ್ತಾತ್ರಯ ರಾಮದಾಸ್ ಗಡೆ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
ಪುಣೆ ಬಸ್ ಅತ್ಯಾಚಾರ ಪ್ರಕರಣದ ಆರೋಪಿ ತನ್ನ ಕುಟುಂಬ ಮತ್ತು ಸ್ನೇಹಿತರಿಗೆ ತಾನು ದೊಡ್ಡ ತಪ್ಪು ಮಾಡಿದ್ದೇನೆ ಮತ್ತು ಶರಣಾಗಬೇಕು ಎಂದು ಹೇಳಿದ್ದಾನೆ.