ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದ ಕಾನ್ಸ್‌ಟೇಬಲ್ ಒಬ್ಬರು ತಮ್ಮ ಮಗ ಅನಾರೋಗ್ಯದಿಂದ ಬಳಲುತ್ತಿದ್ದು, ಆತನಿಗೆ ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ. ಈ ಕಾರಣದಿಂದ ಆತ ಮೃತಪಟ್ಟಿದ್ದಾರೆ. ಅವನ ಕಡೆಯ ಕ್ಷಣಗಳನ್ನು ನೋಡಲು ಆಗಲಿಲ್ಲ ಎಂದು ಮನಕುಲುಕುವ ಪೋಸ್ಟ್ ಒಂದನ್ನು ಮಾಡಿದ್ದಾರೆ.
ವಿಜಯಪುರ ನಗರದ ಗಾಂಧಿಔಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಆಗಿರುವ ಎ.ಎಸ್ ಬಂಡುಗೊಳ ಅವರು ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಪೊಸ್ಟ್ ಹಾಕಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೊ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾರೆ.
ಕಾನ್ಸ್‌ಟೇಬಲ್ ಎ.ಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗು ಮೃತಪಟ್ಟ ಬಳಿಕ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಮೆಸೇಜ್ ಹಾಕಿದ್ದಾರೆ. ಇನ್ನೂ ಈ ಘಟನೆಯನ್ನು ಡಿಜಿಪಿ, ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮಾಧ್ಯಮಗಳಿಗೆ ಜೊಹೇದ್ ಕಿಂಗ್ ಎಂಬ ಹೆಸರಿನ ಇನ್‌ಸ್ಟಾಗ್ರಾಮ್‌ನಿಂದ ಟ್ಯಾಗ್ ಕೂಡ ಮಾಡಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಎ.ಎಸ್ ಬಂಡುಗೋಳ ಯಾವುದೇ ರಜೆ ಕೇಳಿಲ್ಲ. ಮೌಖಿಕವಾಗಿ ಹಾಗೂ ಲಿಖಿತವಾಗಿ ಗಾಂಧಿಚೌಕ್ ಪೊಲೀಸ್ ಠಾಣಾಧಿಕಾರಿಗಳ ಬಳಿ ರಜೆ ಕೇಳಿಲ್ಲ. ಮೊನ್ನೆ ಹಾಗೂ ನಿನ್ನೆ ಅವರು ಕರ್ತವ್ಯಕ್ಕೂ ಹಾಜರಾಗಿಲ್ಲ ಎಂದಿದ್ದಾರೆ.