ಸಂತೋಷ್ ಯಾರೆಂದು ಗೊತ್ತಿಲ್ಲ, ನಾನೇಕೆ ರಾಜೀನಾಮೆ ಕೊಡಲಿ..?: ಸಚಿವ ಕೆ.ಎಸ್.ಈಶ್ವರಪ್ಪ

ಹೊಸದಿಗಂತ ವರದಿ ಮೈಸೂರು:‌

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಗುತ್ತಿಗೆದಾರ ಸಂತೋಷ್ ಯಾರು ಎಂದು ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು,
ಸಂತೋಷ್ ಯಾರು ಅಂತ ನನಗೆ ಗೊತ್ತಿಲ್ಲ, ಆತ ನಮ್ಮ ಬಗ್ಗೆ ಆರೋಪ ಮಾಡಿರುವ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವೆ. ಅದೂ ಅಲ್ಲದೆ ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಕೂಡ ಪಡೆದಿಲ್ಲ.

ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವೂ ನನಗೆ ಗೊತ್ತಿಲ್ಲ, ಆತನ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!