October 18, 2026
Sunday, October 18, 2026
spot_img

ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ, ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಗೆಲುವು ಪಕ್ಕಾ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚ ರಾಜ್ಯ ಚುನಾವಣೆಗೆ ಮತದಾನ ನಡೆದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದ್ದು, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ .

ಗುವಾಹಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಸಮೀಕ್ಷೆ ಹೇಗೆ ಇರಲಿ, ನನಗೆ ನಂಬಿಕೆ ಇಲ್ಲ. ಈ ಬಾರಿ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

ಸಣ್ಣ ಪ್ರಮಾಣದಲ್ಲಿ ಸಮೀಕ್ಷೆಯನ್ನು ಲೆಕ್ಕಾಚಾರ ಹಾಕುವುದು ಅಂದರೆ ಕಷ್ಟ. ಹೀಗಾಗಿ ನನಗೆ ಯಾವುದೇ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ. ನಾನು ಇಲ್ಲಿಗೆ ಬಂದಿರುವ ಉದ್ದೇಶ ನಮ್ಮ ಶಾಸಕರನ್ನು ರಕ್ಷಿಸಿ, ಮಾರ್ಗದರ್ಶನ ನೀಡಲು ತಿಳಿಸಿದರು.

ಅಸ್ಸಾಂನಲ್ಲೂ ಈ ಬಾರಿ ನಮ್ಮ ಅಭ್ಯರ್ಥಿಗಳು ಗೆದ್ದು ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ನಾಯಕರ ಮೇಲೆ ನಮಗೆ ನಂಬಿಕೆ ಇದೆ. ಮತದಾರರ ಮೇಲೆ ವಿಶ್ವಾಸವಿದ್ದು, ಈ ಬಾರಿ ಸಿಗಲಿದೆ ಎಂಬ ಆತ್ಮವಿಶ್ವಾಸವಿದೆ ಎಂದರು.

Must Read