ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನ ಅಕ್ರಮವಾಗಿ ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕರೊಬ್ಬರು ಆರೋಪಕ್ಕೆ ಕಾಂಗ್ರೆಸ್‌ನ ಓವರ್ ಸೀಸ್ ಯೂನಿಟ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತೀಯ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಪರಿಗಣಿಸಿ, ಭಾರತದಲ್ಲಿ ನನಗೆ ಯಾವುದೇ ಭೂಮಿ, ಮನೆ ಅಥವಾ ಷೇರುಗಳು ಇಲ್ಲ ಎಂದು ಈ ಆರೋಪದ ಕುರಿತು ಸ್ಪಷ್ಟನೆ ನೀಡಲು ಇಷ್ಟ ಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಮಯದಲ್ಲಿ ಭಾರತ ಸರ್ಕಾರದೊಂದಿಗೆ ಕೆಲಸ ಮಾಡಿದ ನನ್ನ ಅಧಿಕಾರಾವಧಿಯಲ್ಲಿ ನಾನು ಎಂದಿಗೂ ಯಾವುದೇ ಸಂಬಳವನ್ನುಕೂಡ ತೆಗೆದುಕೊಂಡಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ದೇಶದಲ್ಲಿ ನಾನು ಯಾವತ್ತಿಗೂ ಲಂಚ ಕೊಟ್ಟಿಲ್ಲ ಅಥವಾ ತೆಗೆದುಕೊಂಡು ಇಲ್ಲ ಎಂಬುದನ್ನು ನಿಸ್ಸಂದಿಗ್ಧವಾಗಿ ಹೇಳಲು ಬಯಸುತ್ತೇನೆ ಎಂದು ಪಿತ್ರೋಡಾ ಹೇಳಿದ್ದಾರೆ.