ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಕೃಷಿ ವಿವಿ ಕುರಿತು ಹುಟ್ಟಿಕೊಂಡಿರುವ ರಾಜಕೀಯ ದುರುದ್ದೇಶದ ಅಪಪ್ರಚಾರ ದುಃಖಕರ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ವಿಷಯದಲ್ಲಿ ನಾನೆಂದೂ ರಾಜಕೀಯ ಮಾಡಿಲ್ಲಾ. ಇದು ನನ್ನ ವ್ಯಕ್ತಿತ್ವವಲ್ಲ. ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.