ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಅರೆಸ್ಟ್ ಕುರಿತು ನನಗೆ ಗೊತ್ತಿಲ್ಲ. ನನಗೆ ಟಿವಿ ನೋಡಲು ಸಮಯ ಸಿಕ್ಕಿಲ್ಲ, ನಾನು ಪೇಪರ್ ಓದಿಲ್ಲ. ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವ ಪರಮೇಶ್ವರ್ ಇದ್ದಾರೆ. ಆ ಬಗ್ಗೆ ಮಾಹಿತಿ ಕೊಡುತ್ತಾರೆ. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದಷ್ಟೇ ಹೇಳಿದರು.