Friday, January 9, 2026

ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆ ಎಂದು ಗೊತ್ತಿಲ್ಲ: ಅಚ್ಚರಿಯ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಇತಿಹಾಸದಲ್ಲಿ ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ.

ಇತ್ತ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆ ಎಂದು ಗೊತ್ತಿಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಯು ಇದೀಗ ಸಂಚಲನ ಸೃಷ್ಟಿಸಿದೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗಿ ದಾಖಲೆ ವಿಚಾರವಾಗಿ ಜನರ ಆಶೀರ್ವಾದದಿಂದ ನಾನು ಇಲ್ಲಿಯವರೆಗೂ ಬಂದಿದ್ದೇನೆ. ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೋ ನನಗೆ ಗೊತ್ತಿಲ್ಲ. ಜನರ ಆಶೀರ್ವಾದ ಇರುವವರೆಗೂ ನಾನು ಕೆಲಸ ಮಾಡುತ್ತೇನೆ. ರಾಜಕೀಯದಲ್ಲಿ ಇದುವರೆಗೂ ನಾನು ಮಾಡಿದ ಕೆಲಸ ತೃಪ್ತಿ ತಂದಿದೆ ಎಂದು ತಿಳಿಸಿದರು.

error: Content is protected !!