ನಾನು ರಾಜಕೀಯದಲ್ಲಿ ಎಷ್ಟು ದಿನ ಇರುತ್ತೇನೋ, ಬಿಡುತ್ತೇನೋ ಗೊತ್ತಿಲ್ಲ: ಹೀಗ್ಯಾಕಂದ್ರು ಡಿಕೆಶಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು ರಾಜಕೀಯದಲ್ಲಿ ಎಷ್ಟು ದಿನ ಇರುತ್ತೇನೋ, ಬಿಡುತ್ತೇನೋ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ನೆರವೇರಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೆಲಸ ಮಾಡಬೇಕು. ವಿಸಿಟಿಂಗ್​ ಕಾರ್ಡ್​ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ಕೆಲಸ ಮಾಡದ ಯಾರೇ ಆಗಲಿ ಚುನಾವಣೆಯ ನಂತರ ಮಾಜಿಗಳು ಆಗ್ತಾರೆ. ನಾನು ಎಷ್ಟು ದಿನ ರಾಜಕೀಯದಲ್ಲಿ ಇರಬಲ್ಲೆನೋ ಗೊತ್ತಿಲ್ಲ. ನೀವೆಲ್ಲಾ ಕೆಲಸ ಮಾಡಬೇಕು, ನಿಮಗೆ ಕಾರು, ರೂಂ ಕೊಡಲ್ಲ. ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!