ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್‌ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಅಶೋಕ್ ಯಾವಾಗ ಭವಿಷ್ಯ ಹೇಳೋದನ್ನ ಕಲಿತರೋ ಗೊತ್ತಿಲ್ಲ ಎಂದು ಟಾಂಗ್ ನೀಡಿದ್ದಾರೆ.
ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಿಲ್ಲ. ಅಂಥ ಯಾವುದೇ ಬೆಳವಣಿಗೆ ನಡೆದಿಲ್ಲ. ನಾವೆಲ್ಲ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ ಅಂತ ಅಂದುಕೊಂಡಿದ್ದೇವೆ. ಈ ಮಧ್ಯೆ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.