ಹೊಸದಿಗಂತ ಡಿಜಿಟಲ್ ಡೆಸ್ಕ್;
ತಾವು ರಾಜನಾಗಲು ಬಯಸುವುದಿಲ್ಲ ಮತ್ತು ಅದರ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
‘ಸಾಂವಿಧಾನಿಕ ಸವಾಲುಗಳು: ದೃಷ್ಟಿಕೋನಗಳು ಮತ್ತು ಮಾರ್ಗಗಳು’ ಎಂಬ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ಗಾಂಧಿ ಮಾತನಾಡುವ ವೇಳೆ ಸಭಾಂಗಣದಲ್ಲಿದ್ದವರು ‘ಇಸ್ ದೇಶ್ ಕಾ ರಾಜಾ ಕೈಸಾ ಹೋ, ರಾಹುಲ್ ಗಾಂಧಿ ಜೈಸಾ ಹೋ’ ಎಂಬ ಘೋಷಣೆಗಳನ್ನು ಕೂಗಲಾರಂಭಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ‘ಇಲ್ಲ ಬಾಸ್, ಮೈನ್ ರಾಜಾ ನಹೀಂ ಹುಂ. ರಾಜಾ ಬನಾನೇ ಭೀ ನಹಿಂ ಚಾಹತಾ ಹುಂ. ಮೈನ್ ರಾಜಾ ಕೇ ಎಗೆನೆಸ್ಟ್ ಹುಂ, ಕಾನ್ಸೆಪ್ಟ್ ಕೆ ಭೀ ಎಗೆನೆಸ್ಟ್ ಹುಂ (ಇಲ್ಲ ಬಾಸ್, ನಾನು ರಾಜನಲ್ಲ. ನಾನು ರಾಜನಾಗಲು ಬಯಸುವುದಿಲ್ಲ. ನಾನು ರಾಜ ಮತ್ತು ಆ ಪರಿಕಲ್ಪನೆಗೆ ವಿರುದ್ಧವಾಗಿದ್ದೇನೆ)’ ಎಂದು ಪ್ರತಿಕ್ರಿಯಿಸಿದರು.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ರಾಜ’ ಎಂದು ಟೀಕಿಸಿದ್ದ ರಾಹುಲ್ ಗಾಂಧಿ, ಅವರು ಜನರ ಧ್ವನಿಯನ್ನು ಕೇಳುತ್ತಿಲ್ಲ ಎಂದು ಆರೋಪಿಸಿದ್ದರು.