ನನಗೆ ಜೀರೋ ಟ್ರಾಫಿಕ್‌ ಬೇಡ: ಸಿಎಂ ಸಿದ್ದರಾಮಯ್ಯ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಅವರು ನನಗೆ ಜೀರೋ ಟ್ರಾಫಿಕ್‌ ಬೇಡವೆಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರನ್ನು ಟ್ರಾಫಿಕ್‌ ಸಿಟಿ ಎಂದೂ ಕರೆಯಬಹುದು. ಆದರೆ, ಮಳೆಬಂದ ಹಿನ್ನೆಲೆಯಲ್ಲಿ ತುರ್ತು ಕಾರ್ಯ ನಿಮಿತ್ತ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಂಚಾರ ಮಾಡುವಾಗ ಭಾರಿ ಪ್ರಮಾಣದ ಟ್ರಾಫಿಕ್‌ ನಿರ್ಮಾಣವಾಗಿತ್ತು. ಇದನ್ನು ನೋಡಿ ತಾವೂ ಕೂಡ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡಿದ ಘಟನೆ ನಡೆಯಿತು. ಒಬ್ಬ ಮುಖ್ಯಮಂತ್ರಿಯಾಗಿ ಜೀರೋ ಟ್ರಾಫಿಕ್‌ ಇರುವ ನನಗೇ ಇಷ್ಟೊಂದು ಸಮಸ್ಯೆ ಆಗುತ್ತಿರುವಾಗ, ಜನಸಾಮಾನ್ಯರಿಗೆ ಎಷ್ಟು ತೊಂದರೆ ಆಗಬೇಡ ಎಂದು ಆಲೋಚನೆ ಮಾಡಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!