ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಅರ.ಅಶೋಕ್, ಡಿಕೆ ಶಿವಕುಮಾರ್ ಸ್ಥಿತಿಯನ್ನು ನೋಡಿದರೆ ಕರುಣೆ ಹುಟ್ಟುತ್ತದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಹಂಚಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಜೊತೆ ಯಾರ ಸಮಕ್ಷಮದಲ್ಲಿ ಒಪ್ಪಂದವಾಯಿತು ಅನ್ನೋದನ್ನು ಡಿಸಿಎಂ ಸ್ಪಷ್ಟವಾಗಿ ಹೇಳದೆ ಕತ್ತಲೆಯಲ್ಲಿ ಕರಡಿ ಹುಡುಕುವ ಕೆಲಸ ಮಾಡುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಇವರಲ್ಲಿ ಯಾರಿದ್ದರು ಎಂದು ಶಿವಕುಮಾರ್ ಹೇಳಿದ್ದರೆ ಅವರ ಕೆಲಸ ಸುಲಭವಾಗುತ್ತಿತ್ತು ಎಂದು ಅಶೋಕ್ ತಿಳಿಸಿದ್ದಾರೆ.