ನಾನೇ ಗ್ಯಾರಂಟಿ…ಶಕ್ತಿ ಯೋಜನೆಯು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಶಕ್ತಿ ಯೋಜನೆಯು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ, ಇದಕ್ಕೆ ನಾನೇ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಹಿಳೆಯರ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕೊನೆಯಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಪಪ್ರಚಾರ ನಡೆಸುತ್ತಿದ್ದರು.ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿ ಟ್ವೀಟ್‌ ಮಾಡಿದ್ದು, ಮಾತ್ರವಲ್ಲದೇ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದು, ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ. ಎಂದು ಮಾಹಿತಿ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!