ಹೊಸದಿಗಂತ ಡಿಜಿಟಲ್ ಡೆಸ್ಕ್:
ನನಗೆ ಕಾಂಗ್ರೆಸ್ ನಿಂದ ಆಫರ್ ಬಂದಿತ್ತು. ಬಿಜೆಪಿ ಬಿಟ್ಟು ನಾನು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ. ನಾನು ಹೋದರೆ ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಬಳ್ಳಾರಿಯಲಿ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ನಾನು, ಬಿಎಸ್ ಯಡಿಯೂರಪ್ಪ ಅನಂತ್ ಕುಮಾರ್ ಸೇರಿದಂತೆ ಹಲವರು ರಾಜ್ಯದಲ್ಲಿ ಪಕ್ಷ ಕಟ್ಟಿದ್ವಿ. ಅದಕ್ಕೂ ಮೊದಲು ಹಲವರು ರಕ್ತಸ್ರಸಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ, ಕಾರ್ಪೊರೇಷನ್ ಚುನಾವಣೆ ಮಾಡೋದಕ್ಕೂ ಜನ ಇರಲಿಲ್ಲ. ಅಂತಹ ಸಂದರ್ಭದಲ್ಲಿ ನಾವು ಪಕ್ಷ ಕಟ್ಟಿದ್ದೇವೆ ಎಂದರು.
ಮತ್ತೆ ಪಕ್ಷವನ್ನು ಕಟ್ಟಬೇಕಿದೆ. ಬೇರೆ ಪಕ್ಷಗಳಿಂದಲೂ ನನಗೆ ಆಫರ್ ಬಂತು. ಸಿದ್ದರಾಮಯ್ಯ ಸಂಪುಟದ ಹಲವು ಸಚಿವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದರು. ನನಗೆ ಹಾಗೂ ನನ್ನ ಮಗನಿಗೆ ಸ್ಥಾನಮಾನ ಕೊಡುವುದಾಗಿ ಹೇಳಿದ್ದರು. ಅಲ್ಲದೇ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ನನ್ನನ್ನು ಕರೆದಿದ್ದರು. ಆದರೆ ನಾನು ಹಿಂದುತ್ವವಾದಿ ಸತ್ತರು ಕೂಡ ಹಿಂದುತ್ವದಲ್ಲೇ ಸಾಯುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು.