Thursday, March 30, 2023

Latest Posts

‘ನನ್ನ ಫೋನ್‌ನಲ್ಲಿ ಪೆಗಾಸಸ್ ಇತ್ತು, ಭಾರತೀಯ ಪ್ರಜಾಪ್ರಭುತ್ವ ದಾಳಿಯಲ್ಲಿದೆ’ : ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪೆಗಾಸಸ್ ಸ್ನೂಪಿಂಗ್ ವಿಷಯವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಾವೂ ಸೇರಿದಂತೆ ಭಾರತದ ಹಲವು ರಾಜಕಾರಣಿಗಳ ಮೊಬೈಲ್‌ಗಳಲ್ಲಿ ಪೆಗಾಸಸ್ ಸಾಫ್ಟ್‌ವೇರ್ ಇದೆ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದದಲ್ಲಿ ಹೇಳಿದ್ದಾರೆ.

ಈ ಕುರಿತು ಗುಪ್ತಚರ ಅಧಿಕಾರಿಗಳು ನನಗೆ ಕರೆ ಮಾಡಿದ್ದಾರೆ, ಅವರು ಫೋನ್‌ನಲ್ಲಿ ನೀವು ಏನು ಹೇಳುತ್ತೀರೋ ಅದರ ಬಗ್ಗೆ ಜಾಗರೂಕರಾಗಿರಿ ಎಂದು ನನಗೆ ಹೇಳಿದ್ದರು ಎಂದು ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.

ತನಿಖಾ ಸಂಸ್ಥೆಗಳ ದುರುಪಯೋಗದ ಬಗ್ಗೆ ಕೇಂದ್ರದ ಮೇಲೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ‘ಪ್ರತಿಪಕ್ಷಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಕ್ರಿಮಿನಲ್ ಪ್ರಕರಣಗಳ ಅಡಿಯಲ್ಲಿ ಬಾರದ ವಿಷಯಗಳಲ್ಲಿಯೂ ನನ್ನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ’ಎಂದು ಹೇಳಿದರು.

‘ಮಾಧ್ಯಮಗಳು ಮತ್ತು ಪ್ರಜಾಪ್ರಭುತ್ವದ ಮೇಲೆ ಈ ರೀತಿಯ ಆಕ್ರಮಣ ನಡೆಯುತ್ತಿರುವಾಗ ಪ್ರತಿಪಕ್ಷಗಳು ಜನರೊಂದಿಗೆ ಸಂವಹನ ನಡೆಸುವುದು ತುಂಬಾ ಕಷ್ಟ’ಎಂದು ಗಾಂಧಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!