September 28, 2026
Monday, September 28, 2026
spot_img

‘ಅವರಿಗೆ ಮಾತು ಕೊಟ್ಟಿದ್ದೆ’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಯಾಕಾಗಿ ರಾಜೀನಾಮೆ ನೀಡಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.

ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅವರು ರಾಜೀನಾಮೆ ನೀಡುವಂತೆ ಹೇಳಿದಾಗ ನಾನು ರಾಜೀನಾಮೆ ನೀಡಿದೆ’ ಎಂದರು.

ಇದನ್ನೂ ಓದಿ:

ಗೃಹಲಕ್ಷ್ಮಿ ಯೋಜನೆ ನೀಡಲಿಲ್ಲ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು ಎಂದು ಸಿ.ಟಿ. ರವಿ ಹೇಳಿದ್ದಾರಂತೆ ಆದರೆ ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟದ್ದಕ್ಕಾಗಿ ರಾಜೀನಾಮೆ ನೀಡಿದೆ. ರಾಜಕೀಯದಲ್ಲಿ ನೀಡಿದ ಮಾತನ್ನು ಉಳಿಸಿಕೊಳ್ಳೋದು ಬಹಳ ಮುಖ್ಯ ಹೀಗಾಗಿ ತಾವು ರಾಜೀನಾಮೆ ನೀಡಿದ್ದಾಗಿ ಅವರು ತಿಳಿಸಿದರು.

ಮೋದಿ ವಿರುದ್ಧ ಟೀಕಾಪ್ರಹಾರ

ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದು, “ಮೋದಿ ಏನು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ರಾ? ಸಂಗೊಳ್ಳಿ ರಾಯಣ್ಣನಂತೆ ಹೋರಾಡಿದ್ರಾ?” ಎಂದು ಪ್ರಶ್ನಿಸಿದ ಅವರು, ಜನರು ಸುಮ್ಮನೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ ಎಂದು ಟೀಕಿಸಿದರು.

Must Read