ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಬಳಿ ಪೆನ್ ಡ್ರೈವ್ ಇದೆ ಎಂದು ಹೇಳಿರುವುದು ಸತ್ಯ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾರಾರು ಏನೇನು ಕುತಂತ್ರ ಮಾಡಿದ್ದಾರೋ ಅದು ಈ ಪೆನ್ ಡ್ರೈವ್ ನಲ್ಲಿದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ
ಇತ್ತೀಚೆಗಷ್ಟೇ ಲಕ್ಷ್ಮಣ್ ಸವದಿ ‘ಕುಮಾರಸ್ವಾಮಿ ಅವರು ಪೆನ್ ಡ್ರೈವ್ ಬಗ್ಗೆ ಮಾತನಾಡುವುದನ್ನು ನಾನು ನೋಡಿದ್ದೇನೆ. ತುಂಬಾ ಜನರ ಕಡೆ ಪೆನ್ಡ್ರೈವ್ ಇದ್ದಾವೆ. ನನ್ನ ಹತ್ತಿರ ಒಂದು ಪೆನ್ಡ್ರೈವ್ ಇದೆ, ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇನೆ ಎಂದಿದ್ದರು.