ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಆಂತರಿಕ ಕಲಹ ಮುಂದುವರೆದಿರುವಂತೆಯೇ ರಾಜ್ಯದ ಮಾಸ್ ಲೀಡರ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಶ್ರೀರಾಮುಲು, ಇಷ್ಟು ದಿನ ಸೈಲೆಂಟ್ ಆಗಿದ್ದೆ, ಇನ್ಮುಂದೆ ಸುಮ್ಮನೆ ಇರಲ್ಲ. ದೆಹಲಿಗೆ ಅಪಾಯಿಂಟ್‌ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ.
ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್‌ಗೆ ಹೇಳಿ ಬರುತ್ತೇನೆ. ಅಲ್ಲದೆ ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ. ಆದರೆ, ಇನ್ನು ಮುಂದೆ ಸುಮ್ಮನೆ ಇರೋದಿಲ್ಲ ಎಂದಿದ್ದಾರೆ.
ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ. ಆದರೆ ಬಡವರು, ಶ್ರಮಿಕರು, ರೈತರ ಪರ ಇರುವ ಕಾರ್ಯಕರ್ತರ ಜತೆ ಇರುತ್ತೇನೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.