ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದರು. ಇದಕ್ಕೂ ಮುನ್ನ ಡ್ರೆಸ್ಸಿಂಗ್ ರೂಮ್ನಲ್ಲಿ ಕೊಹ್ಲಿ ಅವರೊಂದಿಗೆ ಅಶ್ವಿನ್ ತಮ್ಮ ನಿವೃತ್ತಿ ಬಗ್ಗೆ ಚರ್ಚಿಸಿದ್ದರು.
ನಾನು ನಿಮ್ಮೊಂದಿಗೆ 14 ವರ್ಷಗಳಿಂದ ಆಡಿದ್ದೇನೆ. ನೀವು ಇಂದು ನಿವೃತ್ತರಾಗುತ್ತಿದ್ದೀರಿ ಎಂದು ನೀವು ನನಗೆ ಹೇಳಿದಾಗ, ಅದು ನನ್ನನ್ನು ಸ್ವಲ್ಪ ಭಾವುಕರನ್ನಾಗಿಸಿತು. ಎಲ್ಲಾ ವರ್ಷಗಳಲ್ಲಿ ಒಟ್ಟಿಗೆ ಆಡಿದ ನೆನಪುಗಳು ನನ್ನ ಕಣ್ಮುಂದೆ ಬಂದವು. ನಿಮ್ಮೊಂದಿಗಿನ ಪ್ರಯಾಣದ ಪ್ರತಿಯೊಂದು ಕ್ಷಣಗಳನ್ನು ನಾನು ಆನಂದಿಸಿದ್ದೇನೆ.
ಭಾರತೀಯ ಕ್ರಿಕೆಟ್‌ಗೆ ನಿಮ್ಮ ಕೌಶಲ್ಯ ಮತ್ತು ಪಂದ್ಯವನ್ನು ಗೆಲ್ಲುವ ಕೊಡುಗೆಗಳು ಯಾವತ್ತೂ ದ್ವಿತೀಯ ದರ್ಜೆಯದ್ದಾಗಿರಲಿಲ್ಲ. ನೀವು ಎಂದೆಂದಿಗೂ ಭಾರತೀಯ ಕ್ರಿಕೆಟ್‌ನ ದಂತಕಥೆಯಾಗಿ ನೆನಪಿನಲ್ಲಿ ಉಳಿಯುತ್ತೀರಿ. ಕುಟುಂಬದೊಂದಿಗೆ ನಿಮ್ಮ ಜೀವನವು ಸುಖಕರವಾಗಿರಲಿ. ಇದಕ್ಕಿಂತ ಹೆಚ್ಚಿನದನ್ನು ನಾನು ಬಯಸುವುದಿಲ್ಲ. ಪ್ರೀತಿ ಗೌರವದೊಂದಿಗೆ.. ಎಲ್ಲದಕ್ಕೂ ಧನ್ಯವಾದಗಳು ಗೆಳೆಯ ಎಂದು ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ನು ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅಶ್ವಿನ್ ಡ್ರೆಸ್ಸಿಂಗ್ ರೂಮ್ನಲ್ಲಿ ಪರಸ್ಪರ ಆಲಿಂಗನ ಮಾಡುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೇ ಸಂದರ್ಭದಲ್ಲಿ ಅಶ್ವಿನ್ ತಮ್ಮ ನಿವೃತ್ತಿ ನಿರ್ಧಾರವನ್ನು ತಿಳಿಸಿದ್ದರು. ಇದೀಗ 14 ವರ್ಷಗಳ ಕಾಲ ಜೊತೆಯಾಗಿ ಆಡಿದ ಆಟಗಾರನ ನಿವೃತ್ತಿಯಿಂದ ವಿರಾಟ್ ಕೊಹ್ಲಿ ಭಾವುಕರಾಗಿದ್ದಾರೆ.