ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪದಿಂದಾಗಿ ದಿಢೀರ್ ಆಗಿ ರ್‍ಯಾಲಿ ರದ್ದುಗೊಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ಭದ್ರತೆಯಲ್ಲಿ ದೊಡ್ಡ ಲೋಪ ಉಂಟಾದ ಹಿನ್ನೆಲೆಯಲ್ಲಿ ಪಂಜಾಬ್ನ ಫಿರೋಜ್ಪುರ್ನಲ್ಲಿ ಚುನಾವಣಾ ಪ್ರಚಾರ ನಡೆಸಬೇಕಾಗಿದ್ದ ಪ್ರಧಾನಿ ರ್ಯಾಲಿಯನ್ನು ರದ್ದುಗೊಳಿಸಿದ್ದು, ದೆಹಲಿಗೆ ವಾಪಸ್ ಆಗಿದ್ದಾರೆ.
ದೆಹಲಿಗೆ ಹೊರಟ ಪ್ರಧಾನಿ ಭಟಿಂಡಾ ಸೆಕ್ಯೂರಿಟಿ ಅಧಿಕಾರಿಗಳ ಜೊತೆ ಮಾತನಾಡಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಟಿಂಡಾ ಏರ್ ಪೋರ್ಟ್ ನಲ್ಲಿ, ‘ನಾನು ಇಲ್ಲಿಯವರೆಗೆ ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದಿದ್ದಾರೆ.
ಆಗಿದ್ದೇನು?
ಪಂಜಾಬ್ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಬಟಿಂಡಾಗೆ ಬಂದಿಳಿದಿದ್ದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಅವರು ಸ್ಥಳಕ್ಕೆ ತೆರಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಹೀಗಾಗಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿ ಅಡಚಣೆ ಉಂಟು ಮಾಡಿದ್ದು ಓವರ್ ಬಳಿಯೇ ಪ್ರಧಾನಿ ಬೆಂಗಾವಲು ಪಡೆ ವಾಹನವನ್ನು ತಡೆದುಬಿಟ್ಟಿದ್ದರು.
ಇದರ ಪರಿಣಾಮ ಪ್ರಧಾನಿ ಅವರ ಕಾರು ಸುಮಾರು 15-20 ನಿಮಿಷಗಳ ಕಾಲ ನಿಲ್ಲುವಂತಾಗಿತ್ತು. ಇದೊಂದು ಗಂಭೀರವಾದ ಭದ್ರತಾ ಲೋಪ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ.